ಬೆಂಗಳೂರು: ಮನೆ ಕೆಲಸದವಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ನಟಿ ರಮ್ಯಾ, ‘ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ವಿರುದ್ಧದ ಅಪರಾಧಕ್ಕೆ ಕಠಿಣ ಶಿಕ್ಷೆಯಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಕೆ.ಆರ್.ನಗರ ಮೂಲದ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಚಿತ್ರೀಕರಣ ಪ್ರಜ್ಕರನಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಹಾಗೂ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.