HomeEntertainment42ನೇ ವಸಂತಕ್ಕೆ ಕಾಲಿಟ್ಟ ಮೋಹಕ ತಾರೆ ರಮ್ಯಾ

42ನೇ ವಸಂತಕ್ಕೆ ಕಾಲಿಟ್ಟ ಮೋಹಕ ತಾರೆ ರಮ್ಯಾ

ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಮ್ಯಾ ಇಂದು 42ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

2003ರಲ್ಲಿ ತೆರೆ ಕಂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಅಭಿ’ ಚಿತ್ರದಲ್ಲಿ ಬಾನು ಎಂಬ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸಿನಿ ಪ್ರಯಾಣ ಆರಂಭಿಸಿದರು. ಬಳಿಕ ಅದೇ ವರ್ಷದಲ್ಲಿ ತೆಲುಗಿನ ‘ಅಭಿಮನ್ಯು’ ಹಾಗೂ ತಮಿಳಿನ ‘ಕುತ್ತು’ ಚಿತ್ರದಲ್ಲಿ ತೆರೆ ಹಂಚಿಕೊಂಡರು.

ನಟಿ ರಮ್ಯಾ ‘ರಂಗ ಎಸ್‌ಎಸ್‌ಎಲ್‌ಸಿ’ ಸೇರಿದಂತೆ ‘ಆಕಾಶ್’ ‘ಗೌರಮ್ಮ’ ‘ಅಮೃತದಾರೆ’ ‘ಸೇವಂತಿ ಸೇವಂತಿ’ ಹೀಗೆ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಜನಪ್ರಿಯ ನಟಿಯಾಗಿ ಹೊರಹೊಮ್ಮಿದರು.  ರಮ್ಯಾ ಇತ್ತೀಚೆಗೆ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಕೆಲವೊಂದು ಸಿನಿಮಾಗಳಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular