HomeKarnatakaನಾಳೆಯಿಂದ ರಾಜ್ಯ, ದೇಶಾದ್ಯಂತ ರಂಜಾನ್ ಉಪವಾಸ ಆರಂಭ, ಕರಾವಳಿಯಲ್ಲಿ ಇಂದಿನಿಂದಲೇ ಶುರು

ನಾಳೆಯಿಂದ ರಾಜ್ಯ, ದೇಶಾದ್ಯಂತ ರಂಜಾನ್ ಉಪವಾಸ ಆರಂಭ, ಕರಾವಳಿಯಲ್ಲಿ ಇಂದಿನಿಂದಲೇ ಶುರು

ಬೆಂಗಳೂರು: ರಾಜ್ಯ ಹಾಗೂ ದೇಶಾದ್ಯಂತ ನಾಳೆಯಿಂದ ರಂಜಾನ್ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎಂದು ಬೆಂಗಳೂರು ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ತಿಳಿಸಿದ್ದಾರೆ.

ಕರಾವಳಿಯಲ್ಲಿ ಸೌದಿ ಸಂಪ್ರದಾಯ ಪಾಲಿಸಲಾಗುತ್ತದೆ. ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಉಪವಾಸ ಆರಂಭವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಉಪವಾಸ ವ್ರತ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಣೆ ಮಾಡಿದ್ದಾರೆ.

ಇಸ್ಲಾಮಿಕ್ ಕ್ಯಾಲೆಂಡರ್‌ನ ಒಂಬತ್ತನೇ ತಿಂಗಳಲ್ಲಿ ರಂಜಾನ್ ಆಚರಿಸಲಾಗುತ್ತದೆ. ಪವಿತ್ರ ಮಾಸ ರಂಜಾನ್ ಅನ್ನು ಪ್ರಪಂಚದಾದ್ಯಂತ ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಈ ಸಮಯದಲ್ಲಿ 30 ದಿನಗಳ ಕಾಲ ಉಪವಾಸ ಅನುಸರಿಸುತ್ತಾರೆ. ಪ್ರತಿದಿನ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸ ಅನುಸರಿಸುತ್ತಾರೆ. ಸೂರ್ಯಾಸ್ತದ ಸಮಯದಲ್ಲಿ ಇಫ್ತಾರ್ ಭೋಜನದೊಂದಿಗೆ ಉಪವಾಸ ಮುಗಿಯುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular