HomeLatest NewsBIG NEWS: ನುಗು ಅಭಯಾರಣ್ಯ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಸಚಿವ ಜಾರ್ಜ್ ಪುತ್ರ ರಾಣಾಗೆ ಹೈಕೋರ್ಟ್...

BIG NEWS: ನುಗು ಅಭಯಾರಣ್ಯ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಸಚಿವ ಜಾರ್ಜ್ ಪುತ್ರ ರಾಣಾಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಪುತ್ರ ರಾಣಾ ಜಾರ್ಜ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ನುಗು ವನ್ಯಜೀವಿ ಅಭಯಾರಣ್ಯದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅನುಮತಿ ನೀಡಿದೆ.

ಸಚಿವೆ ಕೆ.ಜೆ.ಜಾರ್ಜ್ ಪುತ್ರ ರಾಣಾ ಜಾರ್ಜ್, ರಾತ್ರಿ ವೇಳೆ ತಮ್ಮ ಜಮೀನಿಗೆ ತೆರಳಲು ಅಭಯಾರಣ್ಯದ ಮೂಲಕ ಹಾದು ಹೋಗುವ ರಸ್ತೆ ಬಳಸಲು ಅನುಮತಿ ನೀಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ವನ್ಯಜೀವಿಗಳಿಗೆ ತೊಂದರೆ ಆಗದಂತೆ ಸಂಚಾರ ನಡೆಸುವಂತೆ ಅನುಮತಿ ನೀಡಿದೆ.

ರಾಣಾ ಜಾರ್ಜ್ ಹೆಚ್.ಡಿ.ಕೋಟೆ ತಾಲೂಕಿನ ಶಂಬುಗೌಡನಹಳ್ಳಿ ಮತ್ತು ಲಕ್ಕಸೋ ಗ್ರಾಮದಲ್ಲಿ ಜಮೀನು ಹೊಂದಿದ್ದು, ಈ ಭಾಗಕ್ಕೆ ತೆರಳಲು ನುಗು ಅಭಯಾರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ರಸ್ತೆ ಬಳಸಲು ನಿಷೇಧಿಸಲಾಗಿತ್ತು. ಇದೀಗ ರಾತ್ರಿ-ಹಗಲು ಸಂಚಾರಕ್ಕೆ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular