HomeKarnatakaBIG NEWS: ಗೊಂದಲಗಳಿಗೆ ತೆರೆ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ಸುರ್ಜೇವಾಲ ಸ್ಪಷ್ಟನೆ

BIG NEWS: ಗೊಂದಲಗಳಿಗೆ ತೆರೆ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ಸುರ್ಜೇವಾಲ ಸ್ಪಷ್ಟನೆ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಆರಂಭವಾಗಿದ್ದ ಗೊಂದಲಗಳಿಗೆ ಹೈಕಮಾಂಡ್ ನಾಯಕರು ಕೊನೆಗೂ ತೆರೆ ಎಳೆದಿದ್ದಾರೆ.

ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು. ವೋಟುತರುವವರನ್ನು ನೇಮಕ ಮಾಡಬೇಕು. ಇಲ್ಲವೇ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವುದಾದರೆ ಅದನ್ನು ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆ ಆರಂಭವಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆ ತಿವ್ರಗೊಳ್ಳುತ್ತಿದ್ದಂತೆ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ಗೊಂದಲಕ್ಕೆ ತೆರೆ ಎಳೆದಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧ್ಯಕ್ಷರ ಬದಲಾವಣೆ ಮಾಡಬೇಕು ಎನ್ನುವುದಾದರೆ ಅವರು ಸಭೆಗೆ ಯಾಕೆ ಬರುತ್ತಿದ್ದರು? ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ತಿಳಿಸುವ ಮೂಲಕ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular