HomeKarnatakaBREAKING: ಹೈಕಮಾಂಡ್ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ: ಊಹಾಪೋಹಗಳಿಗೆ ಕಿವಿಗೊಡಬೇಡಿ: ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ

BREAKING: ಹೈಕಮಾಂಡ್ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ: ಊಹಾಪೋಹಗಳಿಗೆ ಕಿವಿಗೊಡಬೇಡಿ: ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪಟ್ಟದ ಆಟ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ನಾಳೆಯೇ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಬೆಳವಣಿಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದು, ಮಹತ್ವದ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲಾ, ಯಾವುದೇ ಅನಧಿಕೃತ ಸುದ್ದಿಗಳನ್ನು ಹರಡಿಸಬೇಡಿ. ಹೈಕಮಾಂಡ್ ನಾಯಕರು ಅಂತಹ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಹೈಕಮಾಂಡ್ ಸಧ್ಯಕ್ಕೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ನಾಳೆ ಯಾವುದೇ ಶಾಸಕಾಂಗ ಪಕ್ಷದ ಸಭೆಯನೂ ಕರೆದಿಲ್ಲ. ಸಿದ್ದರಾಮಯ್ಯನವರು ವಿಪಕ್ಷನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಕಷ್ಟು ಅನುಭವಗಳು ಅವರಿಗಿದೆ. ಹಾಗೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಲವು ಮುಖ್ಯಮಂತ್ರಿಗಳ ಜೊತೆಗೆ ಕೆಲಸ ಮಾಡಿದ ಅನುಭವಿದೆ. ಸಂಘಟನಾ ಚತುರತೆ ಉಳ್ಳವರು. ರಾಜ್ಯದ ಜನರ ಹಿತ ಕಾಪಾಡುವಂತಹ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ ಹೀಗೆ ನಡೆಯಲಿದೆ, ಹಾಗೆ ನಡೆಯಲಿದೆ ಎಂದು ಸುದ್ದಿ ಹಬ್ಬಿಸಬೇಡಿ. ಅಂತಹ ಯಾವುದೇ ಬೆಳವಣಿಗೆಗಳ ಬಗ್ಗೆ ಚರ್ಚೆಯಾಗಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗಿಡಬೇಡಿ ಎಂದು ತಿಳಿಸಿದರು.

ಈ ಮೂಲಕ ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಹಿಂಪಡೆಯಲಿದ್ದಾರೆಯೇ? ಅಥವಾ ಸಿದ್ದರಾಮಯ್ಯ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಲಿ ಎಂಬ ಕಾರಣಕ್ಕೆ ಹೈಕಮಾಂಡ್ ನಾಯಕರು ಇಂತದ್ದೊಂದು ಹೇಳಿಕೆ ಮೂಲಕ ಪರೋಕ್ಷ ವಾಗಿ ನೀಡುತ್ತಿರುವ ಸಂದೇಶವೇ? ಎಂಬ ಚರ್ಚೆ ಆರಂಭವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular