HomeEntertainmentBIG NEWS: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿ ಕ್ಷಮೆ ಕೇಳಿದ ನಟ ರಣವೀರ್ ಸಿಂಗ್

BIG NEWS: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿ ಕ್ಷಮೆ ಕೇಳಿದ ನಟ ರಣವೀರ್ ಸಿಂಗ್

ಮೈಸೂರು: ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ಕ್ಷಮೆ ಕೋರಿದ್ದಾರೆ.

ಕೆಲ ದಿನಗಳ ಹಿಂದೆ ಕಾಂತಾರಾ ಸಿನಿಮಾದ ದೈವದ ಬಗ್ಗೆ ಅನುಕರಣೆ ಮಾಡುವ ನೆಪದಲ್ಲಿ ದೈವಕ್ಕೆ ಅಪಮಾನ ಮಾಡಿದ್ದರು ರಣವೀರ್ ಸಿಂಗ್. ರಣವೀರ್ ಸಿಂಗ್ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತಲ್ಲದೇ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ರಣವೀರ್ ಸಿಂಗ್​​ ಅವರಿಗೆ ಮಾಡಿದ ತಪ್ಪಿಗೆ ಕ್ಷಮೆ ಕೇಳುವಂತೆ ಹೈಕೋರ್ಟ್ ಸೂಚಿಸಿತ್ತು. ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆ ಕೇಳುವುದಾಗಿ ರಣವೀರ್ ಸಿಂಗ್ ಹೇಳಿಕೆ ನೀಡಿದ್ದರು. ಇದೀಗ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿಯ ಬಳಿ ಕ್ಷಮೆ ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋವಾನಲ್ಲಿ ನಡೆದಿದ್ದ ಅಂತರಾಷ್ಟ್ರೀಯ ಚಲನಚಿತ್ರೋತ್ವದಲ್ಲಿ ವಿಶೇಷ ಅತಿಥಿಯಾಗಿ ರಣವೀರ್ ಸಿಂಗ್ ಭಾಗವಹಿಸಿದ್ದರು. ಅದೇ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ಸಹ ವೇದಿಕೆಯ ಮುಂದೆ ಇದ್ದರು. ಈ ವೇಳೆ ರಿಷಬ್ ಶೆಟ್ಟಿ ಅವರನ್ನು ಮಾತನಾಡಿಸುವ ಸಂದರ್ಭದಲ್ಲಿ ಕಾಂತಾರಾ ಸಿನಿಮಾದ ದೈವದ ಬಗ್ಗೆ ಮಾತನಾಡುತ್ತಾ ದೈವವನ್ನು ಹೀಯಾಳಿಸಿ ಅನುಕರಣೆ ಮಾಡಿದ್ದರು. ರಣವೀರ್ ಸಿಂಗ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಮರು ದಿನವೇ ರಣವೀರ್ ಸಿಂಗ್ ಕ್ಷಮೆ ಕೇಳಿದರಾದರೂ, ಈ ಬಗ್ಗೆ ಹೈಕೋರ್ಟ್​​ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ರಣವೀರ್ ಮಾಡಿರುವುದು ತಪ್ಪೆಂದು ತೀರ್ಮಾನಿಸಿ, ಚಾಮುಂಡಿ ದೇವಾಲಯದಲ್ಲಿ ಕ್ಷಮೆ ಕೇಳಬೇಕು ಎಂದು ಕೆಲ ವಾರಗಳ ಹಿಂದೆ ಸೂಚನೆ ನೀಡಿತ್ತು. ಆದರೆ ರಣವೀರ್ ಸಿಂಗ್ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ಆದರೆ ಇದೀಗ ಬಾಲಿವುಡ್ ನಿಂದ ಬ್ಯಾನ್ ಸೇರಿದಂತೆ ಜೀವನದಲ್ಲಿ ಒಂದರ ಹಿಂದೊಂದು ಸಮಸ್ಯೆಗಳು ಎದುರಾಗುತ್ತಿದ್ದಂತೆ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿರುವ ರಣವೀರ್ ಸಿಂಗ್ ಚಾಮುಂಡಿ ದೇವಾಲಯದ ಗರ್ಭಗುಡಿಯಲ್ಲಿ ಕುಳಿತು ತಾಯಿಯ ಮುಂದೆ ಕ್ಷಮೆ ಯಾಚನೆ ಮಾಡಿದ್ದಾರೆ. ಅಲ್ಲದೆ, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಬ್ಯಾನ್ ಆದೇಶದಿಂದಾಗಿ ರಣವೀರ್ ಸಿಂಗ್ ಅವರು ಭಾರತದಲ್ಲಿ ಹೊಸ ಸಿನಿಮಾಗಳ ಶೂಟಿಂಗ್ ಮಾಡಲು ಅಥವಾ ಹೊಸ ಚಿತ್ರಗಳನ್ನು ನಿರ್ಮಿಸಲು ಸಾಧ್ಯವಾಗುವುದಿಲ್ಲ. ವಿವಾದ ಬಗೆಹರಿಯುವವರೆಗೂ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಗಿದೆ. ಧುರಂಧರ್ 2’ ಚಿತ್ರದ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಅವರಿಗೆ ಬಾಲಿವುಡ್‌ನಲ್ಲಿ ಭಾರಿ ಬೇಡಿಕೆ ಇತ್ತು. ಆದರೆ ಇದೇ ಸಂದರ್ಭದಲ್ಲಿ ಅವರ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರಣವೀರ್ ಸಿಂಗ್ ಈ ಹಿಂದೆ ತಾವು ಚಾಮುಂಡಿ ದೇವಿಗೆ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿಯ ಕ್ಷಮೆ ಕೋರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular