HomeKarnatakaರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ: ಪ್ರವಾಸಿಗರಿಗೆ ನಿರಾಸೆ

ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ: ಪ್ರವಾಸಿಗರಿಗೆ ನಿರಾಸೆ

ಮಂಡ್ಯ: ತೀವ್ರ ವಿರೋಧದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದ್ದು, ಇದರ ಪರಿಣಾಮ ಇದೀಗ ಪ್ರವಾಸಿ ತಾಣ ರಂಗನತಿಟ್ಟು ಪಕ್ಷಿದಾಮದ ಮೇಲೂ ಬೀರುತ್ತಿದೆ. ಕಳೆದ ಕೆಲ ದಿನಗಳಿಂದ ರಂಗನತಿಟ್ಟು ಪಕ್ಷಿಧಾದಲ್ಲಿ ಬೋಟಿಂಗ್ ಸ್ಥಗಿತಗೊಂಡಿದೆ.

ನದಿಯಲ್ಲಿ ನೀರಿನ ಹರಿವು ಏರುಪೇರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಕಳೆದ 10 ದಿನಗಳಿಂದ ದೋಣಿ ವಿಹಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯವಾಗಿ ಮುಂಗಾರು ಹಂಗಾಮಿನಲ್ಲಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಮಾತ್ರ ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿ ಬೋಟಿಂಗ್ ಬಂದ್ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಬರಗಾಲದ ನಡುವೆಯೂ ತಮಿಳುನಾಡಿಗೆ ಕೆಆರ್‌ಎಸ್‌ ಡ್ಯಾಂನಿಂದ ನಿತ್ಯ ಸುಮಾರು 9,000 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನದಿಯಲ್ಲಿ ನೀರಿನ ಹರಿವಿನ ವೇಗ ಹಾಗೂ ಮಟ್ಟದಲ್ಲಿ ದಿಢೀರ್ ಏರುಪೇರಾಗುತ್ತಿರುವುದರಿಂದ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಅರಣ್ಯ ಇಲಾಖೆ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಇದರಿಂದಾಗಿ ಪಕ್ಷಿಧಾಮಕ್ಕೆ ಬರುವ ಪ್ರವಾಅಸಿಗರು ನಿರಾಶರಾಗಿದ್ದಾರೆ. ಬೋಟಿಂಗ್ ಸ್ಥಗಿತಗೊಂಡ ಪರಿಣಾಮ ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಸದಾ ಗಿಜಿಗುಡುತ್ತಿದ್ದ ಪ್ರವಾಸಿ ತಾಣ ಇದೀಗ ಜನರಿಲ್ಲದೆ ಬಿಕೋ ಎನ್ನುತ್ತಿದೆ.

ಒಂದೆಡೆ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ಇಲ್ಲಿನ ರೈತರಿಗೆ ಬೆಳೆ ಬೆಳೆಯಲು ನೀರಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಬರಗಾಲದ ನಡುವೆಯೂ ನೆರೆ ರಾಜ್ಯ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಕಾವೇರಿ ಕಣಿವೆಯ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆ.ಆರ್.ಎಸ್.ಜಲಾಶಯಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರಕ್ಕೆಂದು ದೂರದೂರುಗಳಿಂದ ಆಗಮಿಸುತ್ತಿರುವ ಪ್ರವಾಸಿಗರು, ಬೋಟಿಂಗ್ ಇಲ್ಲದೇ ನಿರಾಸೆಯಿಂದ ವಾಪಸ್ ಆಗುತ್ತಿದ್ದಾರೆ.

ಪಿಜಿಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪೇಯಿಂಗ್ ಗೆಸ್ಟ್ (ಪಿಜಿ)ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿವಿಧ ಪ್ರದೇಶದಲ್ಲಿರುವ ಪಿಜಿ ವಸತಿ ಗೃಹಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಆಹಾರ ಇಲಾಖೆಯು ಬರೋಬ್ಬರಿ 64 ಪಿಜಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಈ ಬೃಹತ್ ಕಾರ್ಯಾಚರಣೆಯಲ್ಲಿ ಹಲವಾರು ಕಡೆಗಳಲ್ಲಿ ಆಹಾರ ಸುರಕ್ಷತೆಯ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ.

ದಾಳಿಯ ವೇಳೆ, 23 ಪಿಜಿಗಳಿಂದ 12 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಈ ಪರೀಕ್ಷೆಗಳ ಪ್ರಾಥಮಿಕ ವರದಿಯಲ್ಲಿ, ಮೊಸರು, ಅಕ್ಕಿಹಿಟ್ಟು, ಆಹಾರ ಬಣ್ಣ ಮತ್ತು ಕರಿಮೆಣಸು ಸೇರಿದಂತೆ ಹಲವು ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪಿಜಿಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನಿಸುವಂತೆ ಮಾಡಿದೆ.

ಡೈನಿಂಗ್ ಟೇಬಲ್‌ನಲ್ಲಿ ತಿಗಣೆ ಔಷಧಿ ಪತ್ತೆ:

ಬೊಮ್ಮಸಂದ್ರದ ನಂದನ ಎಲೈಟ್ ಪಿಜಿಯಲ್ಲಿ ಸ್ವಲ್ಪವೂ ಸ್ವಚ್ಛತೆ ಇಲ್ಲದಿರುವುದು ಕಂಡುಬಂದಿದೆ. ಇಲ್ಲಿ ಕಳಪೆ ನೈರ್ಮಲ್ಯದ ಜೊತೆಗೆ ಊಟದ ಮೇಜಿನ ಮೇಲೆ ಕಸ, ಕಡ್ದಿಗಳು, ಗಲೀಜು ಕಂಡುಬಂದಿದೆ. ಅಚ್ಚರಿಯ ವಿಷಯವೆಂದರೆ, ಪಿಜಿಯ ಡೈನಿಂಗ್ ಟೇಬಲ್‌ನಲ್ಲಿ ತಿಗಣೆ ಔಷಧಿ ಕೂಡ ಪತ್ತೆಯಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ನೈರ್ಮಲ್ಯ ಉಲ್ಲಂಘನೆಯ ಆರೋಪದ ಮೇಲೆ ಈ ಪಿಜಿಯ ಊಟದ ಪ್ರದೇಶವನ್ನು ತಕ್ಷಣವೇ ಮುಚ್ಚಲು ಆದೇಶಿಸಲಾಗಿದೆ.

ಪಿಜಿಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ನಿರಂತರ ದೂರು ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸ್ವಚ್ಛತೆ ಇಲ್ಲದ, ಗುಣಮಟ್ಟದ ಆಹಾರ ನೀಡದ ಹಾಗೂ ಆಹಾರ ಸುರಕ್ಷತೆ ನಿಯಮ ಉಲ್ಲಾಂಘಿಸಿರುವ ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಆಹಾರ ಸಚಿವ ಯು.ಟಿ.ಖಾದರ್ ಸೂಚನೆ ಮೇರೆಗೆ ಪಿಜಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular