‘ಗಾಂಧಿ ಭಾರತ ಶತಮಾನೋತ್ಸವ’ ಹಿನ್ನೆಲೆಯಲ್ಲಿ ರಂಗಾಯಣದಿಂದ ರಾಜ್ಯಾದ್ಯಂತ 3 ನಾಟಕಗಳ ಪ್ರದರ್ಶನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬೆಳಗಾವಿಯಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು ಕಳೆದ ವರ್ಷಕ್ಕೆ ಶತಮಾನ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಬಂಧ ಗಾಂಧಿ ಭಾರತ ಶತಮಾನೋತ್ಸವʼ ಸಮಿತಿಯ ಸಭೆ ನಡೆಸಿದ ಸಿಎಂ ಸಿದ್ಧರಾಮಯ್ಯ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಗಾಂಧೀಜಿಯವರ ವಿಚಾರಧಾರೆಗಳು, ಆದರ್ಶಗಳನ್ನು ಪ್ರಚುರಪಡಿಸುವ ಅಗತ್ಯ ಇಂದು ಎಂದಿಗಿಂತಲೂ ಹೆಚ್ಚಿದೆ ಎನ್ನುವುದನ್ನು ಅರಿತು ನಮ್ಮ ಸರ್ಕಾರ ಗಾಂಧಿ ಭಾರತವೆಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆಯಲ್ಲಿ ಇದರ ಯಶಸ್ಸು ಅಡಗಿದೆ. ಹೀಗಾಗಿ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವೂ ಇರಲಿ ಎಂದು ತಿಳಿಸಿದ್ದಾರೆ.

ಈ ಸಭೆಯ ಮುಖ್ಯಾಂಶಗಳು ಹೀಗಿವೆ;

•ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26, 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನೆಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.

• ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.

•ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು.

•ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸಲಾಗುವುದು.

•ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆಗಳನ್ನು ಆಯೋಜಿಸಲಾಗುವುದು. ಮಹಾತ್ಮ ಗಾಂಧೀಜಿ ಅವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳನ್ನು ಎಲ್ಲಾ ಶಾಲೆಗಳಲ್ಲಿ ಬರೆದು ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು.

•ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ ಮೂರು ನಾಟಕಗಳನ್ನು ನಿರ್ಮಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ.

•ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಇನ್ನೂ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ವೀರಪ್ಪ ಮೊಯ್ಲಿ, ಹೆಚ್.ಕೆ. ಪಾಟೀಲ್, ಆರ್.ವಿ. ದೇಶಪಾಂಡೆ, ಬಿ.ಎಲ್. ಶಂಕರ್ ಮೊದಲಾದವರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read