HomeLatest Newsರೇಂಜ್ ರೋವರ್‌ನ 'ಡೆತ್ ಸ್ಟಂಟ್': ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ; ಸಾರ್ವಜನಿಕರ ಕೆಂಗಣ್ಣು |...

ರೇಂಜ್ ರೋವರ್‌ನ ‘ಡೆತ್ ಸ್ಟಂಟ್’: ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ; ಸಾರ್ವಜನಿಕರ ಕೆಂಗಣ್ಣು | Watch

ಚಂಡೀಗಢದ ಸೆಕ್ಟರ್ 22ರಲ್ಲಿರುವ ಅರೋಮಾ ಲೈಟ್ ಪಾಯಿಂಟ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಕಪ್ಪು ಬಣ್ಣದ ರೇಂಜ್ ರೋವರ್ ಕಾರು ಅತಿ ವೇಗದಲ್ಲಿ ಮತ್ತು ಅತ್ಯಂತ ನಿರ್ಲಕ್ಷ್ಯದಿಂದ ಚಾಲನೆಗೊಂಡು ಅಪಾಯಕಾರಿ ಸಾಹಸ ಪ್ರದರ್ಶನ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ವಿಡಿಯೋದಲ್ಲಿ, ವಾಹನವು ಜನನಿಬಿಡ ಸಂಚಾರ ಜಂಕ್ಷನ್ ಬಳಿ ಅತಿ ವೇಗದಲ್ಲಿ ಚಲಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಈ ದುಸ್ಸಾಹಸದ ಸಂದರ್ಭದಲ್ಲಿ ಆಕ್ಟಿವಾ ಸ್ಕೂಟರ್ ಸವಾರರೊಬ್ಬರು ಕೂದಲೆಳೆ ಅಂತರದಲ್ಲಿ ಭೀಕರ ಅಪಘಾತದಿಂದ ಪಾರಾಗಿದ್ದಾರೆ. ಘಟನೆಗೆ ಸಾಕ್ಷಿಯಾದವರು, “ಇನ್ನೇನು ಕೆಲವೇ ಸೆಕೆಂಡುಗಳು ತಡವಾಗಿದ್ದರೆ, ಅದು ಮಾರಣಾಂತಿಕ ದುರಂತಕ್ಕೆ ಕಾರಣವಾಗುತ್ತಿತ್ತು,” ಎಂದು ಹೇಳಿದ್ದಾರೆ.

ರಸ್ತೆ ಮಧ್ಯೆ ಈ ರೀತಿ ಅಪಾಯಕಾರಿ ಚಾಲನೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ. ಘಟನಾ ಸ್ಥಳದಿಂದ ಕೇವಲ ಕೆಲವೇ ದೂರದಲ್ಲಿ ಪೊಲೀಸ್ ಠಾಣೆ ಇದ್ದರೂ, ತಕ್ಷಣದ ಕ್ರಮ ಕೈಗೊಳ್ಳದಿರುವ ಬಗ್ಗೆ ನಿವಾಸಿಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಾಲಕರ ನಿರ್ಲಕ್ಷ್ಯತನವನ್ನು ಖಂಡಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಸೆಕ್ಟರ್ 22ರ ಪೊಲೀಸ್ ಠಾಣೆಯ ಅಧಿಕಾರಿಗಳು ಮಾತನಾಡಿ, ವೈರಲ್ ವಿಡಿಯೋ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ವಿಡಿಯೋ ಅಥವಾ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ವಾಹನವನ್ನು ಪತ್ತೆ ಹಚ್ಚಿದ ನಂತರ, ಸಂಬಂಧಪಟ್ಟ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಘಟನೆ ನಗರದ ರಸ್ತೆಗಳಲ್ಲಿನ ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

For Latest News Updates, Join Our Whatsapp Community🚩
RELATED ARTICLES

Most Popular