ಪಿಜಿ ನೀಟ್: ದಾಖಲೆ ಪರಿಶೀಲನೆ ಇಂದಿನಿಂದ ಆರಂಭ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆ ಆಗಸ್ಟ್ 4 ರಿಂದ ಆರಂಭವಾಗಲಿದೆ.

ಆಗಸ್ಟ್ 4ರಿಂದ 9ರವರೆಗೆ, ಆಗಸ್ಟ್ 10 ಹಾಗೂ 11ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ದಾಖಲಾತಿ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ಸಂಬಂಧಿತ ದಾಖಲೆಗಳೊಂದಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರಾಧಿಕಾರದ ಕೇಂದ್ರ ಕಚೇರಿಗೆ ತಮ್ಮ ರ್ಯಾಂಕಿಂಗ್ ಗೆ ತಕ್ಕಂತೆ ನಿಗದಿಪಡಿಸಿದ ದಿನದಂದು ಕಡ್ಡಾಯವಾಗಿ ಹಾಜರಾಗಬೇಕು.

ಪ್ರಾಧಿಕಾರದ http://kea.kar.nic.in ವೆಬ್ ಸೈಟ್ ನಲ್ಲಿ ಯಾವ ರ್ಯಾಂಕಿಂಗ್ ಅಭ್ಯರ್ಥಿಗಳು ಯಾವ ದಿನ ಹಾಜರಾಗಬೇಕೆಂಬ ಮಾಹಿತಿ ಪ್ರಕಟಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read