
ಇಂದು ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬೆಳಗ್ಗೆ ಸದನದ ಕಲಾಪ ಆರಂಭಕ್ಕೂ ಮುನ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಶಾಸಕಾಂಗ ಪಕ್ಷದ ನಾಯಕರಾಗಿ ಆರ್ ಅಶೋಕ್ ನೇಮಕಗೊಂಡ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಕಳೆದ ವಾರ ವಿಧಾನಸಭೆಯಲ್ಲಿ ನಡೆದಿದ್ದ ಗೊಂದಲದ ಹಿನ್ನೆಲೆ ಈ ಸಭೆ ಮಹತ್ವ ಪಡೆದಿದೆ.
ಅಧಿವೇಶನದ ಆರಂಭದಲ್ಲೇ ಶಾಸಕಾಂಗ ಸಭೆ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ಚರ್ಚಿಸಿ ಶಾಸಕರಿಗೆ ಸಲಹೆ ಹಾಗೂ ಕೆಲವು ಸೂಚನೆ ನೀಡುವುದು ವಾಡಿಕೆಯಾಗಿತ್ತು, ಆದ್ರೆ ಈ ಬಾರಿ ಅಧಿವೇಶನದ ನಡುವೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

