HomeKarnatakaBIG NEWS: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಗೌರವ್ ಗುಪ್ತಾ ಸಮಿತಿ ತನಿಖೆಯಲ್ಲಿ...

BIG NEWS: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಗೌರವ್ ಗುಪ್ತಾ ಸಮಿತಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಸರ್ಕಾರ ರಚಿಸಿದ್ದ ಗೌರವ್ ಗುಪ್ತಾ ನೇತೃತ್ವದ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

ರನ್ಯಾ ರಾವ್, ಅಕ್ರಮ ಚಿನ್ನ ಸಾಗಾಟ ಕೇಸ್ ನಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿಯೇ ಭಾಗಿಯಾಗಿರು ವುದು ಸತ್ಯ ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ.

ಏರ್ ಪೋರ್ಟ್ ಸಿಬ್ಬಂದಿ ಭಾಗಿಯಾಗಿದ್ದರಿಂದಲೇ ರನ್ಯಾ, ಸುಲಭವಾಗಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಳು ಎನ್ನಲಾಗಿದೆ. ಪ್ರೋಟೋಕಾಲ್ ಸಿಬ್ಬಂದಿ ಹೇಳಿಕೆಯನ್ನು ದಾಖಲಿಸಲಾಗಿದೆ. ಈ ಮೂಲಕ ರನ್ಯಾ ಮಲತಂದೆ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ಈಗಾಗಲೇ ಶಕ್ತಿಭವನದಲ್ಲಿ ರಾಮಚಂದ್ರರಾವ್ ಅವರ ವಿಚಾರಣೆಯನ್ನು ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೆರಡು ದಿನಗಳಲ್ಲಿ ಗೌರವ್ ಗುಪ್ತಾ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular