SHOCKING : ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿ ಯುವಕ ಪರಾರಿ : ವೀಡಿಯೋ ವೈರಲ್ |WATCH VIDEO

ಲಖನೌ: ವ್ಯಕ್ತಿಯೊಬ್ಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್ ಶಹರ್ ನ ಚೆಹ್ಲಾ ಗ್ರಾಮದಲ್ಲಿ ನಡೆದಿದೆ.

22 ವರ್ಷದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿ ಆರೋಪಿ ಅಫ್ಜಲ್ ಮೊಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಗ್ರಾಮದ ಹಲವು ಮುಖಂಡರು ಆತನ ಬಂಧಕ್ಕೆ ವಿರೋಧಿಸಿದ್ದರು.

ಪೊಲೀಸರು ಬಂದಾಗ ಗ್ರಾಮಸ್ಥರು ಗುಂಪು ಸೇರಿದ್ದರು, ಗುಂಪಿನ ಮಧ್ಯೆಯೇ ಆರೋಪಿಯೂ ಸಾಮಾನ್ಯ ಜನರಂತೆ ನಿಂತಿದ್ದ. ಕೆಲವರು ಆತನನ್ನು ಬಂಧಿಸದಂತೆ ಹೇಳುತ್ತಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸುತ್ತಾರೆ ಎಂಬುದು ಖಚಿತವಾಗುತ್ತಿದ್ದಂತೆ ಆರೋಪಿ ಕನ್ಸ್ ಟೇಬಲ್ ನನ್ನು ತಳ್ಳಿ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಹರಸಾಹಸ ಪಟ್ಟರೂ ಸಾಧ್ಯವಾಗಿಲ್ಲ.

ಅತ್ಯಾಚಾರ ಆರೋಪಿ ಪರಾರಿಯಾಗಲು ಸಹಕರಿಸಿದ 7 ಜನರನ್ನು ಬಂಧಿಸಲಾಗಿದೆ. ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಎಸ್ ಪಿ ತೇಜ್ವೀರ್ ಸಿಂಗ್ ತಿಳಿಸಿದ್ದಾರೆ. ಇನ್ನು ಪೊಲೀಸರ ಮೇಲೆ ದಾಳಿ ನಡೆಸಿ ಆರೋಪಿ ತಪ್ಪಿಸಿಕೊಳ್ಳುವಂತೆ ಮಾಡಿದ ಗ್ರಾಮದ 30 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read