ಬೆಂಗಳೂರು : ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಬಳಿಕ ಮಡೆನೂರು ಮನು ಅವರನ್ನ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಮಡೆನೂರು ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದು, ಇಂದು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ , ಕಿರುತೆರೆ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಸದ್ಯ ಮಡೆನೂರು ಮನು ಪೊಲೀಸರ ವಶದಲ್ಲಿದ್ದಾನೆ.
ಕಿರುತೆರೆ ನಟಿ ಮಡೆನೂರು ಮನು ಮೇಲೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಕಿರುತೆರೆ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣದ ಬಗ್ಗೆ ಸಂತ್ರಸ್ತೆ ನಟಿ ಹಲವು ಸ್ಪೋಟಕ ಆರೋಪ ಮಾಡಿದ್ದಾರೆ.
TAGGED:ಮಡೆನೂರು ಮನು