ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಲೇಜು ಕ್ಲರ್ಕ್ ಭೀಮರಾಜ್ ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬಿ.ಭೀಮರಾಜ್ ಅಮಾನತುಗೊಂಡಿರುವ ಚಿಕ್ಕಬಳ್ಳಾಪುರ ಕಾಲೇಜು ಎಸ್ ಡಿಎ. ಚಿಕ್ಕಬಳ್ಳಾಪುರ ಪ್ರಥಮ ದರ್ಜೆ ಕಾಲೇಜು ಕ್ಲರ್ಕ್ ಆಗಿದ್ದ ಭೀಮರಾಜ್ ವಿರುದ್ಧ ವಿದ್ಯರ್ಥಿನಿ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನಕ್ಕೀಡಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಈ ನಡುವೆ ಶಿಕ್ಷಣ ಇಲಾಖೆ ಆಯುಕ್ತರು ಭೀಮರಾಜ್ ನನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.