ಚಿತ್ರದುರ್ಗ: ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಿತ್ರದುರ್ಗ ನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಮೂಲದ, ಬೆಂಗಳೂರು ನಿವಾಸಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಮೂಲಕ ಯುವತಿ ಪರಿಚಯಿಸಿಕೊಂಡಿದ್ದ ಪಿಎಸ್ಐ ಗಾದಿಲಿಂಗಪ್ಪ 2024ರ ಏಪ್ರಿಲ್ ನಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದ ಆರೋಪ ಕೇಳಿ ಬಂದಿದೆ. ಗಾದಿಲಿಂಗಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ. ಅಕ್ಟೋಬರ್ 21ರಂದು ಬೆದರಿಕೆ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ಯುವತಿ ದೂರು ನೀಡಿದ್ದಾರೆ.
