HomeKarnatakaಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕ ಅರೆಸ್ಟ್

ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕ ಅರೆಸ್ಟ್

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ರಜೆ ಹಾಕಿ ಊರಿಗೆ ಹೊರಟಿದ್ದರು. ಬೆಂಗಳೂರು-ಮುರ್ಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಹೊರಟಿದ್ದ ಯುವತಿಗೆ ಮುಂಜಾನೆ ವೇಳೆ ರೈಲಿನಲ್ಲಿಯೇ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಉಡುಪಿಗೆ ರೈಲು ತಲುಪಲು ಇನ್ನೇನು ಅರ್ಧ ಗಂಟೆ ಇದೆ ಎನ್ನುವಾಗ ಕಾಮುಕ ಈ ರೀತಿ ವರ್ತಿಸಿದ್ದು, ಯುವತಿ ಆಕ್ಷೇಪ ವ್ಯಕ್ತಪಡಿಸಿ ಕೂಗಾಡಿದ್ದಾಳೆ. ಆರೋಪಿ ಮೊಹಮ್ಮದ್ ಶುರೈಮ್ ಎಂಬಾತ ಕ್ಷಮೆ ಕೇಳಿದ್ದಾನೆ. ರೈಲ್ವೆ ಮದತ್ ಆಪ್ ಮೂಲಕ ಯುವತಿ ಉಡುಪಿ ರೈಲ್ವೆ ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಉಡುಪಿಗೆ ಬಂದಿಳಿಯುತ್ತಿದ್ದಂತೆ ಯುವತಿ ಉಡುಪಿ ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿ ನೀಡಿದ್ದ ದೂರು ಹಾಗೂ ಕೆಲ ಸುಳಿವು ಆಧರಿಸಿ ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದಾರೆ. ಮೂರು ಹಂತಗಳಲ್ಲಿ ಪ್ರಯಾಣಿಕರ ಶಾರ್ಟ್ ಲಿಸ್ಟ್ ರೆಡಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿ ಭಟ್ಕಳದಲ್ಲಿ ಇಳಿದಿದ್ದಾನೆ ಎಂಬುದನ್ನು ಪತ್ತೆ ಮಾಡಿದ ಪೊಲೀಸರು ಸಿಸಿಟಿವಿ ದೃಶ್ಯ, ಪ್ರಯಾಣಿಕರ ವಿವರ ಪಡೆದು ಭಟ್ಕಳದ ಮನೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular