ಕೋಲಾರ: ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಮೂವರು ಕಾಮುಕರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಡೆದಿದೆ.
ಬಂಧಿತರನ್ನು ರಾಹುಲ್, ನಾಗೇಶ್, ಪುನೀತ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಆರು ಜನ ಕಾಮುಕರು ನಿರಂತರ ಅತ್ಯಾಚಾರವೆಸಗಿದ್ದರು. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಾದ ಚೇತನ್, ಕಿರಣ್, ಮಹೇಂದ್ರನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.