ನವದೆಹಲಿ: ದೆಹಲಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಈಜು ತರಬೇತಿಗೆ ಬಂದಿದ್ದ ಬಾಲಕಿಯರ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಕೃತ್ಯವೆಸಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈಜು ತರಬೇತಿ ವೇಳೆಯೇ ಕಾಮುಕರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆಸಿದದರೆ. ದೆಹಲಿಯ ನರೇಲಾ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.