HomeKarnatakaವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಕೇಸ್: ಹೇಯ ಕೃತ್ಯ ಮರುಕಳಿಸದಂತೆ ಅಗತ್ಯ ಕ್ರಮ:...

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಕೇಸ್: ಹೇಯ ಕೃತ್ಯ ಮರುಕಳಿಸದಂತೆ ಅಗತ್ಯ ಕ್ರಮ: ಸಿಎಂ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ಧರಾಮತ್ತ ತೀವ್ರವಾಗಿ ಖಂಡಿಸಿದ್ದಾರೆ.

ಇದೊಂದು ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪ ಜಂಗ್ಲಿಗೆ ತೆರಳುವ ರಸ್ತೆಯಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡ ದಂಡೆ ಕಾಲುವೆ ಬಳಿ ಕುಳಿತಿದ್ದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular