ಅತ್ಯಾಚಾರ ಸಂತ್ರಸ್ತೆ ಮದುವೆಯಾದ ಆರೋಪಿ; ರೇಪ್ ಕೇಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿರುವುದನ್ನು ಪರಿಗಣಿಸಿದ ಹೈಕೋರ್ಟ್ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

ಅತ್ಯಾಚಾರ ಸಂತ್ರಸ್ತೆ ಮದುವೆಯಾದ ನಂತರವೂ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದು, ಪೊಲೀಸರ ಕ್ರಮ ಪ್ರಶ್ನಿಸಿ ಆರೋಪಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರಕರಣ ರದ್ದುಪಡಿಸುವಂತೆ  ಕೋರಿದ್ದ. ವಿಚಾರಣೆಗೆ ಹಾಜರಾದ ಸಂತ್ರಸ್ತೆ ದೂರು ಹಿಂಪಡೆಯುವುದಾಗಿ ಹೇಳಿದ್ದು, ಆರೋಪಿ ಕೂಡ ಆಕೆಯನ್ನು ಮದುವೆಯಾಗಿ ಜೀವನಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಪ್ರಮಾಣ ಪತ್ರ ಸಲ್ಲಿಸಿದ್ದ. ಇದನ್ನು ಪರಿಗಣಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ ಅರ್ಜಿದಾರನ ವಿರುದ್ಧದ ಅತ್ಯಾಚಾರ, ಹಣ ವಸೂಲಿ, ಜೀವ ಬೆದರಿಕೆ ಪ್ರಕರಣ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಯಾವುದೇ ತೊಂದರೆ ಕೊಡಬಾರದು ಎಂದು ಸೂಚನೆ ನೀಡಿದೆ.

ಬೆಂಗಳೂರಿನ ಯುವತಿ 2022 ರ ಅಕ್ಟೋಬರ್ ನಲ್ಲಿ ಹುಟ್ಟುಹಬ್ಬದ ಆಚರಣೆಗೆ ಮನೆಗೆ ಕರೆದ ಆರೋಪಿ ಮದ್ಯಪಾನ ಮಾಡಿ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಿದ್ದರು. ಪೊಲೀಸರು ಅತ್ಯಾಚಾರ, ಜೀವ ಬೆದರಿಕೆ, ಹಣ ವಸೂಲಿ ಆರೋಪಗಳಡಿ ಎಫ್ಐಆರ್ ದಾಖಲಿಸಿದ್ದರು.

ಅರ್ಜಿದಾರನ ಪರವಾಗಿ ವಕೀಲ ಸಿ.ಎನ್. ರಾಜು ವಾದ ಮಂಡಿಸಿದ್ದರು. ಸಂತ್ರಸ್ತೆ ಮತ್ತು ಅರ್ಜಿದಾರ ಇಬ್ಬರು ಪ್ರೀತಿಸುತ್ತಿದ್ದು, ಭಿನ್ನಾಭಿಪ್ರಾಯದ ಕಾರಣ ಸಂತ್ರಸ್ತೆ ದೂರು ನೀಡಿದ್ದಾರೆ. ನಂತರ ಅವರು ಪೊಲೀಸರ ಎದುರು ಹಾಜರಾಗಿ ದೂರು ಹಿಂಪಡೆಯುವುದಾಗಿ ಹೇಳಿದ್ದರೂ ಪೊಲೀಸರು ಒಪ್ಪಿರಲಿಲ್ಲ. ದೂರುದಾರಳ ಹೇಳಿಕೆಯನ್ನು ದಾಖಲಿಸದೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ ಎಂದು ತಿಳಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿ ವಿರುದ್ಧದ ಪ್ರಕರಣ ರದ್ದು ಮಾಡಿ ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read