HomeLatest NewsBIG NEWS: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

BIG NEWS: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಬೆಳಗಾವಿ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಉಪನ್ಯಾಸಕನ್ನನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ. ಲಿವಿನ್ ರಿಲೇಷನ್ ಶಿಪ್ ನಲ್ಲಿ ಇರಬೇಕು. ಕರೆದಾಗ ಬರಬೇಕು. ವಿಷಯ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಉಪನ್ಯಾಸಕ ವಿದ್ಯಾರ್ಥಿಗೆ ಬೆದರಿಕೆ ಹಾಕಿ ಕ್ರೌರ್ಯ ಮೆರೆದಿದ್ದ.

ಈ ವಿಷಯವನ್ನು ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದರು. ಸಂತ್ರಸ್ತೆಯ ತಂದೆ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿ ಉಪನ್ಯಾಸಕನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular