HomeLatest NewsBREAKING : ಅತ್ಯಾಚಾರ ಕೇಸ್’ನಲ್ಲಿ ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ :...

BREAKING : ಅತ್ಯಾಚಾರ ಕೇಸ್’ನಲ್ಲಿ ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ : ಪರಪ್ಪನ ಅಗ್ರಹಾರಕ್ಕೆ ಶಿಫ್ಟ್.!

ಬೆಂಗಳೂರು: ಸಹಕಲಾವಿದೆ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಮಡೆನೂರು ಮನುನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಲಯ ಮಡೆನೂರು ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ನಟ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular