ಹಾವೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ನಾಳೆ ಸಂತ್ರಸ್ತೆ ಮನೆಗೆ ‘ಬಿಜೆಪಿ’ ನಿಯೋಗ ಭೇಟಿ

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಮುಸ್ಲಿಂ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಂತ್ರಸ್ತೆ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ.

ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಯುವಕರು ಯುವತಿಯನ್ನು ಥಳಿಸಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಯುವಕರು ರೂಂನಲ್ಲಿ ಯುವತಿಯನ್ನು ಥಳಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಸಾಮೂಹಿಕ ಅತ್ಯಾಚಾರ ಮುಚ್ಚಿಡುವ ಪ್ರಯತ್ನ ಪೊಲೀಸರು ಮಾಡಿದ್ದಾರೆ ಎಂದರು.

ಬೇರೆ ಕೋಮಿನವರು ಆಗಿದ್ದರೇ ಮೊದಲು ಒಳಗೆ ಹಾಕಿ ನಂತರ ವಿಚಾರಣೆ ಮಾಡುತ್ತಿದ್ದರು. ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ? ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವ ವಾತಾವರಣ ಕೆಟ್ಟು ಹೋಗಿದೆ ಎಂದರು.  ನಿಮ್ಮ ಕೆಲಸ ಮಾಡುವವರಿಗೆ ಮಾತ್ರ ನಿಮ್ಮ ರಕ್ಷಣೆ ಇದೆಯಾ ಯಾವುದೇ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ, ಎಂಬುದು ಸ್ಪಷ್ಟವಾಗಿದೆ. ನಾನು ಕರೆ ಮಾಡಿ ಕೇಳಿದರೂ ಕೂಡ ಪೊಲೀಸರು ಮೊಂಡುವಾದ ಮಾಡುತ್ತಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read