ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಎರಡು ಅತ್ಯಾಚಾರ ಪ್ರಕರಣಗಳ ಅರ್ಜಿ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಟಿ ಅವರಿದ್ದ ಪೀಠ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿದೆ.
ವಿಚಾರಣಾ ನ್ಯಾಯಾಧೀಶರು ಈ ಹಿಂದೆ ಒಂದು ಅತ್ಯಾಚಾರ ಪ್ರಕರಣದಲ್ಲಿ ತನ್ನನು ಅಪರಾಧಿ ಎಂದು ಘೋಷಿಸಿದ್ದರಿಂದ ಮುಂದಿನ ಪ್ರಕರಣದಲ್ಲಿಯೂ ತನ್ನ ವಿರುದ್ಧ ಪಕ್ಷಪಾತ ತೋರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಪ್ರಜ್ವಲ್ ಕೇಳಿದ್ದರು. ನಮಗೆ ಅಂತಹ ಯಾವುದೇ ಸಂದೇಹವಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಜ್ವಲ್ ಅರ್ಜಿಯನ್ನು ತಿರಸ್ಕರಿಸಿದೆ.
