HomeLatest NewsBIG NEWS: ಅತ್ಯಾಚಾರ ಪ್ರಕರಣ ಕುರಿತ ಅರ್ಜಿ: ಸುಪ್ರೀಂಕೋರ್ಟ್ ನಲ್ಲಿಯೂ ಪ್ರಜ್ವಲ್ ರೇವಣ್ಣಗೆ ಹಿನ್ನಡೆ

BIG NEWS: ಅತ್ಯಾಚಾರ ಪ್ರಕರಣ ಕುರಿತ ಅರ್ಜಿ: ಸುಪ್ರೀಂಕೋರ್ಟ್ ನಲ್ಲಿಯೂ ಪ್ರಜ್ವಲ್ ರೇವಣ್ಣಗೆ ಹಿನ್ನಡೆ

ನವದೆಹಲಿ: ತಮ್ಮ ವಿರುದ್ಧ ದಾಖಲಾಗಿರುವ ಎರಡು ಅತ್ಯಾಚಾರ ಪ್ರಕರಣಗಳ ಅರ್ಜಿ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಟಿ ಅವರಿದ್ದ ಪೀಠ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿದೆ.

ವಿಚಾರಣಾ ನ್ಯಾಯಾಧೀಶರು ಈ ಹಿಂದೆ ಒಂದು ಅತ್ಯಾಚಾರ ಪ್ರಕರಣದಲ್ಲಿ ತನ್ನನು ಅಪರಾಧಿ ಎಂದು ಘೋಷಿಸಿದ್ದರಿಂದ ಮುಂದಿನ ಪ್ರಕರಣದಲ್ಲಿಯೂ ತನ್ನ ವಿರುದ್ಧ ಪಕ್ಷಪಾತ ತೋರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಪ್ರಜ್ವಲ್ ಕೇಳಿದ್ದರು. ನಮಗೆ ಅಂತಹ ಯಾವುದೇ ಸಂದೇಹವಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಜ್ವಲ್ ಅರ್ಜಿಯನ್ನು ತಿರಸ್ಕರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular