ಬೀದರ್: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಪುತ್ರ ಪ್ರತೀಕ್ ಚೌವ್ಹಾಣ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಬಂಧನ ಭೀತಿಯಲ್ಲಿದ್ದ ಪ್ರತೀಕ್ ಚೌವ್ಹಾಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೀದರ್ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಪ್ರತೀಕ್ ಚೌವ್ಹಣ್ ಪರ ವಕೀಲರು ಬುಧವಾರ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇದೇ ವೇಳೆ ಜಾಮೀನು ಮಂಜೂರು ಮಾಡದಂತೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಇದೀಗ ನ್ಯಾಯಾಲಯ, ಪ್ರತೀಕ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರತೀಕ್ ಚೌವ್ಹಾಣ್ ಗೆ ಬಂಧನ ಭೀತಿ ಎದುರಾಗಿದೆ.