HomeKarnatakaBIG NEWS: ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ಜಾರಿ

BIG NEWS: ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ಆರೋಪಿ ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿಗೆ ತೆಲಂಗಾಣಕ್ಕೆ ತೆರಳಿ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಂಬಂ ಶಿವಕುಮಾರ್ ರೆಡ್ಡಿ, ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿಯೊಬ್ಬಳಿಗೆ ಜ್ಯೂಸ್ ನಲ್ಲಿ ಪ್ರಜ್ಞೆತಪ್ಪಿಸುವ ಔಷಧಿ ಬೆರಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದರು. ಬಳಿಕ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಮುಖಂಡನಿಗೆ ನೋಟಿಸ್ ನೀಡಿದ್ದಾರೆ.

ಶಿವಕುಮಾರ್ ರೆಡ್ಡಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular