HomeKarnatakaಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಪ್ರಕಟ

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಚಾರವೆಸಗಿದ್ದ ಆರೋಪಿಗೆ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ವಿರೂಪಾಕ್ಷಿ ಶಿಕ್ಷೆಗೆ ಗುರಿಯಾದ ಅಪರಾಧಿ. ಮೂರು ವರ್ಷ ಜೈಲು ಶಿಕ್ಷೆ ಹಾಗೂ ಹಾಗೂ 15 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. 2023ರ ಅಕ್ಟೋಬರ್ 4ರಂದು, ವಿರೂಪಾಕ್ಷಿ ತನ್ನ 14 ವರ್ಷದ ಅಪ್ರಾಪ್ತ ಮಗಳನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾನೆ, ಪತ್ತೆ ಮಾಡಿಕೊಡುವಂತೆ ಬಾಲಕಿ ತಂದೆ ಬಿಳಿಚೋಡು ಠಾಣೆಗೆ ದೂರು ನೀಡಿದ್ದರು.

ಬಳಿಕ ಠಾಣೆ ಪೊಲೀಸ್‌ ನಿರೀಕ್ಷಕ ಸೋಮಶೇಖರ್ ಕೆಂಚರೆಡ್ಡಿ ನಡೆಸಿದ ತನಿಖೆಯಿಂದ ಅಪರಾಧಿ ಅಪ್ರಾಪ್ತೆಯನ್ನ ಪುಸಲಾಯಿಸಿ ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದು ಪರೀಕ್ಷೆ ಬರೆಯಲು ಬಂದಿರುವುದಾಗಿ ಸುಳ್ಳು ಹೇಳಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಬೆಳಕಿಗೆ ಬಂದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಪಿಐ ಸೋಮಶೇಖ‌ರ್ ಕೆಂಚರೆಡ್ಡಿ, ಆರೋಪಿ ವಿರುದ್ಧ ನ್ಯಾಯಾಲಯದಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷ್ಸ್‌ ಎಫ್‌ಟಿಎಸ್‌ಸಿ: ನ್ಯಾಯಾಲದ ನ್ಯಾಯಾಧಿಶರಾದ ಶ್ರೀರಾಮ ನಾರಾಯಣ ಹೆಗಡೆ, ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ವಿರೂಪಾಕ್ಷಿಗೆ 3 ವರ್ಷ ಕಾರಾಗೃಹ ಶಿಕ್ಷೆ, 15 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular