HomeKarnatakaಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಪತಿಯನ್ನು ಬಿಟ್ಟಿದ್ದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಹಣ ಒಡವೆ ಪಡೆದು ಅತ್ಯಾಚಾರ ಎಸಗಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಡಗು ಜಿಲ್ಲೆ ಕುಶಾಲನಗರ ನಿವಾಸಿ ರವೂಫ್ ಬಂಧಿತ ಆರೋಪಿ. ಕೇರಳ ಮೂಲದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಕೃತ್ಯವೆಸಗಿದ್ದಾನೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಮಹಿಳೆ ಪರಿಚಯ ಮಾಡಿಕೊಂಡಿದ್ದ ರವೂಫ್ ತಾನು ಅವಿವಾಹಿತ ಎಂದು ಹೇಳಿಕೊಂಡಿದ್ದು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆಕೆಯ ಒಡವೆಗಳನ್ನು ಪಡೆದು ಒತ್ತೆ ಇಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ಕು ದಿನಗಳ ಹಿಂದೆ ಹುಣಸೂರಿಗೆ ಬಂದಿದ್ದ ಇವರು ಲಾಡ್ಜ್ ನಲ್ಲಿ ತಂಗಿದ್ದಾರೆ. ಆತನ ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್ ಇತರೆ ದಾಖಲಾತಿಗಳಲ್ಲಿ ಈತನ ಹೆಸರು ರವೂಫ್. ಅನ್ಯ ಧರ್ಮೀಯ ಎನ್ನುವುದು ಗೊತ್ತಾಗಿದೆ. ಮತ್ತು ಆತನಿಗೆ ಈಗಾಗಲೇ ಮದುವೆಯಾಗಿರುವುದು ಕೂಡ ಗೊತ್ತಾಗಿದೆ. ಈ ಬಗ್ಗೆ ಮಹಿಳೆ ಪ್ರಶ್ನಿಸಿದ್ದಾರೆ.

ಆಗ ಮಹಿಳೆ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಬಳಿಕ ಮಹಿಳೆ ಹುಣಸೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ, ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular