ರಾಯಚೂರು: ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಬೈಕ್ ನಲ್ಲಿ ಬಂದ ಮೂವರು ಕಾಮುಕರು ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಬಂದಿದ್ದ ಮೂವರು ಮುಸುಕುಧಾರಿಗಳು ವಿದ್ಯಾರ್ಥಿನಿಯನ್ನು ಗುಡ್ಡಗಾಡು ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತ ಬಾಲಕಿ 8ನೇ ತರಗತಿ ವಿದ್ಯಾರ್ಥಿನಿ. ಬಾಲಕಿ ತಾಯಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಾಲಕಿಯನ್ನು ಎಳೆದೊಯ್ದು ಈ ಕೃತ್ಯವೆಸಗಿದ್ದಾರೆ ಎಂದು ಬಾಲಕಿ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ. ತಕ್ಷಣ ತಾಯಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.