ಬಾಗಲಕೋಟೆ: ಯಾದಗಿರಿ ಜಿಲ್ಲೆಯಲ್ಲಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಹೇಯ ಘಟನೆ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ 8ನೇ ತರಾಗತಿಯ ವಿದ್ಯಾರ್ಥಿ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಇಳಕಲ್ ಗ್ರಾಮೀಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಳ್ಳಲಾಗಿದೆ.