ತಡರಾತ್ರಿ ಅಪರಿಚಿತ ಮಹಿಳೆ ಹತ್ತಿಸಿಕೊಂಡ ಆಟೋ ಚಾಲಕನಿಂದ ಘೋರ ಕೃತ್ಯ:

ಬೆಂಗಳೂರು: ಇತ್ತೀಚೆಗೆ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿ ರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಜನಪ್ಪ ಗಾರ್ಡನ್ ನಿವಾಸಿ ಮುಬಾರಕ್(38) ಬಂಧಿತ ಆರೋಪಿಯಾಗಿದ್ದಾನೆ. ಫೆಬ್ರವರಿ 20ರಂದು ಬೆಳಗ್ಗೆ, ಕೆಹೆಚ್ ರಸ್ತೆಯ ನಿರ್ಮಾಣ ಹಂತದ ಕಟ್ಟಡದ ಕೆಳಗೆ 25 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಬಿದ್ದಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಂಪಂಗಿರಾಮನಗರ ರಾಣಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.. ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ಆಟೋ ಚಾಲಕ ಮುಬಾರಕ್ ನನ್ನು ಬಂಧಿಸಿದ್ದಾರೆ.

ಫೆಬ್ರವರಿ 20ರಂದು ತಡರಾತ್ರಿ ಕೆಆರ್ ಮಾರುಕಟ್ಟೆ ಬಳಿ ಅಪರಿಚಿತ ಮಹಿಳೆಯನ್ನು ಪರಿಚಯಿಸಿಕೊಂಡು ಆಟೋಗೆ ಹತ್ತಿಸಿಕೊಂಡಿದ್ದ ಮುಬಾರಕ್ 2 ಗಂಟೆ ಕಾಲ ನಗರದ ವಿವಿಧೆಡೆ ಸುತ್ತಾಡಿಸಿ ಕೆಹೆಚ್ ರಸ್ತೆಯ ನಿರ್ಜನ ಪ್ರದೇಶದ ನಿರ್ಮಾಣ ಹಂತದ ಕಟ್ಟಡದ ಒಂದನೇ ಮಹಡಿಗೆ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಒಂದನೇ ಮಹಡಿಯಿಂದ ಕೆಳಗೆ ತಳ್ಳಿ ಪರಾರಿಯಾಗಿದ್ದಾನೆ. ತಲೆಗೆ ಗಂಭೀರ ಪೆಟ್ಟು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಐದು ವರ್ಷಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದ ನಿರ್ಮಾಣ ಹಂತದ ಕಟ್ಟಡದ ಬಳಿ ಸಾರ್ವಜನಿಕರ ಸಂಚಾರ ಕಡಿಮೆ ಇದೆ. ಬೆಳಗ್ಗೆ ಮಹಿಳೆ ಮೃತದೇಹ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read