HomeCrimeಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ

ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ

ಯಾದಗಿರಿ: ಜಮೀನಿನ ಕೆಲಸಕ್ಕೆ ತೆರಳಿದ ವೇಳೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಮುದ್ನಾಳ್ ದೊಡ್ಡ ತಾಂಡಾ ನಿವಾಸಿಯಾಗಿರುವ 35 ವರ್ಷದ ಯುವತಿ ಶನಿವಾರ ಜಮೀನಿನ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರ ಎಸೆಗಿ ಕುತ್ತಿಗೆ ಮತ್ತು ಕಿವಿಗೆ ಚಾಕುವಿನಿಂದ ಇರಿಯಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಆಕೆಯನ್ನು ಸ್ಥಳೀಯರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆ, ತಾಯಿ ಇಲ್ಲದ ಯುವತಿಗೆ ವಿಕಲಚೇತನ ಸಹೋದರ ಇದ್ದಾರೆ. ಐದಾರು ದಿನಗಳ ಹಿಂದೆಯಷ್ಟೇ ಆಕೆಗೆ ಮದುವೆ ನಿಶ್ಚಯವಾಗಿತ್ತು. ತಾಂಡಾ ಜನರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಯಾದಗಿರಿ ಗ್ರಾಮೀಣ ಠಾಣೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular