HomeKarnatakaSHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ನವವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ಕೊಂದು...

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ನವವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ಕೊಂದು ಶವ ಬಾವಿಗೆ ಎಸೆದ ಪಾಪಿಗಳು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರದಲ್ಲಿ ನವವಿವಾಹಿತೆಯೊಬ್ಬರನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿ, ಶವವನ್ನು ಪಾಳು ಬಾವಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಿಳೆಯೊಬ್ಬರು ಗಜೇಂದ್ರ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮದುವೆಗೆ ಕುಟುಂಬಸ್ಥರ ವಿರೋಧವಿದ್ದ ಹಿನ್ನೆಲೆಯಲ್ಲಿ ದಂಪತಿ ಜಮೀನೊಂದರಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಈ ವೇಳೆ ಸುಮಲತಾ ಬಟ್ಟೆ ಬದಲಾಯಿಸುತ್ತಿದ್ದಾಗ ಗಜೇಂದ್ರನ ಸ್ನೇಹಿತ ಬೋರಯ್ಯ ಹೊಂಚು ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆ ಬಳಿಕ ಬೋರಯ್ಯ ತನ್ನ ಸಹೋದರ ಕಾರಯ್ಯನನ್ನು ಕರೆಸಿಕೊಂಡು, ಇಬ್ಬರೂ ಸೇರಿ ಸುಮಲತಾ ಮೃತದೇಹವನ್ನು ಚಳ್ಳಕೆರೆ ತಾಲೂಕಿನ ಮಹಾದೇವಪುರ ಬಳಿಯ ಪಾಳು ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಇತ್ತ ಸುಮಲತಾ ಅವರ ಮೃತದೇಹವನ್ನು ಕುಟುಂಬಸ್ಥರು ಪತ್ತೆಹಚ್ಚಿ, ಗಜೇಂದ್ರನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಅಸಲಿ ಸಂಗತಿ ಬಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೋರಯ್ಯ ಹಾಗೂ ಕಾರಯ್ಯ ಅವರನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ. ನವವಿವಾಹಿತೆಯೊಬ್ಬಳನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular