HomeLatest Newsವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಫಜಲಪುರದ ಪಿಯು ಕಾಲೇಜು ಉಪನ್ಯಾಸಕನನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಅರ್ಥಶಾಸ್ತ್ರ ಉಪನ್ಯಾಸಕ ರಾಜಕುಮಾರ ಕುಂಬಾರ ಬಂಧಿತ ಆರೋಪಿ. ಉಪನ್ಯಾಸಕನ ವಿರುದ್ಧ ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧಿಸುವವರೆಗೂ ತರಗತಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೋಷಕರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಉಪನ್ಯಾಸಕ ರಾಜಕುಮಾರ ಕುಂಬಾರ ಪರಾರಿಯಾಗಿದ್ದ. ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಂತರ ನ್ಯಾಯಾಲಯದ ಆದೇಶದ ಮೇರೆಗೆ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಇತರೆ ವಿದ್ಯಾರ್ಥಿನಿಯರಿಗೂ ಉಪನ್ಯಾಸಕ ರಾಜಕುಮಾರ ಕುಂಬಾರ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular