ಬೆಂಗಳೂರು : ಉತ್ತರಪ್ರದೇಶದ ಮಾಜಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಬೆಂಗಳೂರಿನಲ್ಲಿ ಎಫ್ ಐ ಆರ್ (FIR) ದಾಖಲಾಗಿದೆ.
ಮಾಜಿ ಶಾಸಕ ಭಗವಾನ್ ಶರ್ಮಾ ವಿರುದ್ಧ ಈ ಆರೋಪ ಕೇಳಿಬಂದಿದೆ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ರಿಜಿಸ್ಟಾರ್ ಮದುವೆ ಆಗುವುದಾಗಿ ನಂಬಿಸಿ ಮಹಿಳೆಯನ್ನು ಏರ್ ಪೋರ್ಟ್ ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಲಾಗಿದೆ. ಹಾಗೂ ಖಾಸಗಿ ವಿಡಿಯೋ ಇಟ್ಟುಕೊಂಡು ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಚಿತ್ರದುರ್ಗ, ಬೆಂಗಳೂರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮಾಜಿ ಶಾಸಕ ನಂತರ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಂಪೇಗೌಡ ಏರ್ ಪೋರ್ಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.