HomeKarnatakaಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್ ವಜಾ ಕೋರಿದ್ದ ಅರ್ಜಿ ಹಿಂಪಡೆದ ಹೆಚ್.ಡಿ. ರೇವಣ್ಣ

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್ ವಜಾ ಕೋರಿದ್ದ ಅರ್ಜಿ ಹಿಂಪಡೆದ ಹೆಚ್.ಡಿ. ರೇವಣ್ಣ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ಮತ್ತು ನಂತರ ವಿಶೇಷ ತನಿಖಾ ದಳ(ಎಸ್ಐಟಿ) ಸಲ್ಲಿಸಿದ ಆರೋಪ ಪಟ್ಟಿಯನ್ನು ವಜಾಗೊಳಿಸುವಂತೆ ಕೋರಿದ ಅರ್ಜಿಯನ್ನು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹಿಂಪಡೆದುಕೊಂಡಿದ್ದಾರೆ.

ರೇವಣ್ಣ ಪರ ವಕೀಲ ಬಿ.ಎಂ. ಗಿರೀಶ್ ಕುಮಾರ್ ಅವರು ಸಲ್ಲಿಸಿದ್ದ ಮೆಮೊ ದಾಖಲಿಸಿಕೊಂಡ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ. ಕಾನೂನಿನ ಅನ್ವಯ ಆಕ್ಷೇಪಾರ್ಹವಾದ ಆದೇಶದ ಕುರಿತು ಕ್ರಮ ಕೈಗೊಳ್ಳುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ. ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ.

2025ರ ಜನವರಿ 17ರಂದು ನ್ಯಾಯಾಲಯ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯವನ್ನು ನಿರ್ಬಂಧಿಸಿದ್ದು, ನಂತರ ರೇವಣ್ಣ ಅವರ ಪರ ವಕೀಲರು ಹಲವು ಬಾರಿ ವಿನಾಕಾರಣ ವಿಚಾರಣೆ ಮುಂದೂಡಿಕೆ ಕೋರಿದ್ದರು. ಈ ಹಿನ್ನೆಲೆಯಲ್ಲಿ 2026ರ ಫೆಬ್ರವರಿ 5ರಂದು ಹೈಕೋರ್ಟ್ ಮಧ್ಯಂತರ ಆದೇಶ ತೆರವುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ರೇವಣ್ಣ ಅರ್ಜಿ ಹಿಂಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular