HomeKarnatakaಮಧ್ಯರಾತ್ರಿ ಆಸ್ಪತ್ರೆಗೆ ಬಂದ ಯುವಕನಿಂದ ನೀಚ ಕೃತ್ಯ: ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರ

ಮಧ್ಯರಾತ್ರಿ ಆಸ್ಪತ್ರೆಗೆ ಬಂದ ಯುವಕನಿಂದ ನೀಚ ಕೃತ್ಯ: ಮಲಗಿದ್ದ ವೃದ್ಧೆ ಮೇಲೆ ಅತ್ಯಾಚಾರ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಆರೋಪಿ ಚಿಂತಾಮಣಿ ಹೈದರಾಲಿ ನಗರದ ನಿವಾಸಿ ಇರ್ಫಾನ್(24) ಎಂಬವನನ್ನು ಬಂಧಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ 12:40ರ ಸಮಯಕ್ಕೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಇರ್ಫಾನ್ ಚಿಕಿತ್ಸೆ ಪಡೆದುಕೊಂಡು ವಾಪಸ್ ಮನೆಗೆ ಹೊರಟಿದ್ದಾನೆ. ಈ ವೇಳೆ ಆಸ್ಪತ್ರೆ ಆವರಣದಲ್ಲಿರುವ ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್ ನಲ್ಲಿ ಮಲಗಿದ್ದ 65 ವರ್ಷದ ವೃದ್ದೆ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಅತ್ಯಾಚಾರ ಎಸಗಿ ಮನೆಗೆ ತೆರಳಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಜರಗಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular