HomeKarnatakaBIG NEWS: ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

BIG NEWS: ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಅತ್ಯಾಚಾರವೆಸಗಿ ದುಬೈಗೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ.

ಮಿದುನ್ ಚಂದ್ರನ್ ಬಂಧಿತ ಆರೋಪಿ. ಇಂಟರ್ ಪೋಲ್ ಹಾಗೂ ಸಿಬಿಐ ಸಹಕಾರದಿಂದ ಆರೋಪಿಯನ್ನು ದುಬೈನಲ್ಲಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆ ತರಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2020ರಲ್ಲಿ ಮಿದುನ್ ಚಂದ್ರನ್ ಮೇಲೆ ಅತ್ಯಾಚಾರ ಕೇಸ್ ದಾಖಲಾಗಿತ್ತು. ಬೆಂಗಲೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಾಗುತ್ತಿದ್ದಂತೆ ಮಿದುನ್ ಚಂದ್ರನ್ ದುಬೈಗೆ ಎಸ್ಕೇಪ್ ಆಗಿದ್ದ.

ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ರೆಡ್ ಕಾರ್ನರ್ ನೋಟಿಸ್ ಆಧರಿಸಿ ದುಬೈನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಮಿದುನ್ 2016ರಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿ, ಪ್ರೇಮದ ಹೆಸರಲ್ಲಿ ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ. 2020ರಲ್ಲಿ ಮಹದೇವಪುರ ಠಾಣೆಯಲ್ಲಿ ಮಿದುನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ದುಬೈನಲ್ಲಿ ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular