ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪಿಜಿ ಮಾಲೀಕನನ್ನು ಬಂಧಿಸಲಾಗಿದೆ.
ಅಶ್ರಫ್ ಬಂಧಿತ ಆರೋಪಿ. ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸೋಲದೇವನಹಳ್ಳಿಯ ಪಿಜಿ ಗೆ 10 ದಿನಗಳ ಹಿಂದೆ ವಿದ್ಯಾರ್ಥಿನಿ ಸೇರಿದ್ದರು. ಶನಿವಾರ ತಡರಾತ್ರಿ ಕಾರ್ ನಲ್ಲಿ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು, ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ.