HomeKarnatakaBIG NEWS: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ...

BIG NEWS: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಹೇಯ ಕೃತ್ಯ ರಾಜಧಾನಿ ಬೆಂಗಳೂರಿನಲ್ಲಿ 2022ರಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ಕೋರ್ಟ್ ತೀರ್ಪು ಪ್ರಕಟಿಸಿದೆ.

ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದ ತಂದೆ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಎನ್.ಲೋಹಿತ್ ಬೆಂಗಳೂರಿನ ಐದನೇ ಅಧಿಕ ಮತ್ತು ಸತ್ರ ಪೋಕ್ಸೋ ಕೋರ್ಟ್ ಗೆ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ತಂದೆಗೆ ನ್ಯಾಯಾಧೀಶೆ ಎನ್.ನರಸಮ್ಮ 20 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸಂತ್ರಸ್ತ ಬಾಲಕಿಗೆ ಜಿಲ್ಲಾ ಮತ್ತು ಕಾನೂನು ಪ್ರಾಧಿಕಾರದಿಂದ 7 ಲಕ್ಷ ಪರಿಹಾರ ನೀಡುವಂತೆ ಶಿಫಾರಸು ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular