HomeLatest NewsBREAKING: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ರೈತ ಸಂಘದ ಜಿಲ್ಲಾಧ್ಯಕ್ಷ ಅರೆಸ್ಟ್

BREAKING: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ರೈತ ಸಂಘದ ಜಿಲ್ಲಾಧ್ಯಕ್ಷ ಅರೆಸ್ಟ್

ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷನನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.

ರಾಮೇಗೌಡ ಬಂಧಿತ ಆರೋಪಿ. 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ, ಬಾಲಕಿಯನ್ನು ಗರ್ಭವತಿಯನ್ನಾಗಿ ಮಾಡಿದ್ದಾನೆ. ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಮನೆಯಲ್ಲಿ ಗೊತ್ತಾಗಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ರಾಮೇಗೌಡ, ವಿಷಯ ಬಾಯ್ಬಿಡದಂತೆ ಬೆದರಿಕೆ ಹಾಕಿದ್ದ. ಇದರಿಂದ ಬಾಲಕಿ ತನ್ನ ಮೇಲಿನ ದೌರ್ಜನ್ಯವನ್ನು ಯಾರಿಗೂ ಹೇಳದೇ ಸುಮ್ಮನಿದ್ದಳು. ಆದರೆ ಗರ್ಭವಿತಿಯಾಗುತ್ತಿದ್ದಂತೆ ಮನೆಯಲ್ಲಿ ವಿಷಯ ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತ್ರಸ್ತೆಯ ಕುಟುಂಬ ರಾಮೇಗೌಡ ವಿರುದ್ಧ ಬಂಗಾರಪೇಟೆ ಠಾಣೆಯಲ್ಲಿ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ಠಾಣೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು, ರಾಮೇಗೌಡನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular