ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರ್ಯಾಪಿಡೋ ಚಾಲಕರ ವಿರುದ್ಧ ಸಾಲು ಸಾಲು ದೂರುಗಳು ಕೇಳಿಬರುತ್ತಿವೆ. ಇಲ್ಲೋರ್ವ ರ್ಯಾಪಿಡೋ ಬೈಕ್ ಚಾಲಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಮಹಿಳೆ ಸಿಸಿಟಿವಿ ದೃಶ್ಯಗಳ ಸಮೇತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರ್ಯಾಪಿಡೋ ಚಾಲಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಮನೆಯ ಗೇಟ್ ಗೆ ಮೂತ್ರ ವಿಸರ್ಜಿಸಿ ಬಳಿಕ ಅಸಭ್ಯವಾಗಿ ವರ್ತಿಸಿದ್ದಾನೆ.
ರ್ಯಾಪಿಡೋ ಚಾಲಕ ಶಿವಾರೆಡ್ಡಿ ಎಂಬಾತ ಈ ನೀಚಕೃತ್ಯವೆಸಗಿದ್ದಾನೆ. ಅಲ್ಲದೇ ಮಹಿಳೆಗೆವ್ ಆಡಿಯೋ ನೋಟ್ ಕಳುಹಿಸಿ ಕಿರುಕುಳ ನೀಡಿದ್ದಾನೆ. ಆಡಿಯೋ ನೋಟ್ ನಲ್ಲಿ ಬಾಟಲ್ ನಲ್ಲಿ ಗೇಟ್ ಗೆ ಚಲ್ಲಿದ್ದು ನೀರಲ್ಲ ಮೂತ್ರ ಎಂದು ಹೇಳಿ ವಿಕೃತಿ ಮೆರೆದಿದ್ದಾನೆ.
ಈ ಘಟನೆಗಳಿಂದ ಆಘಾತಗೊಂಡಿರುವ ಮಹಿಳೆ ಮನೆಯಲ್ಲಿನ ಸಿಸಿಟಿವಿ ದೃಶ್ಯ, ಆಡಿಯೋ ನೋಟ್ ಸಮೇತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಶಿವಾರೆಡ್ಡಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹರಿಹರ ಪಂಚಮಸಾಲಿ ಪೀಠದಲ್ಲಿ ಅನುದಾನ ದುರ್ಬಳಕೆ ಪ್ರಕರಣ: ತನಿಖೆಗೆ ಸೂಚಿಸಿದ ರಾಜ್ಯಪಾಲರು
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ವೀರಶೈವ ಲಿಂಗಾಯತ ಪಂಚಮಸಾಲಿ ಮಠ ಸದಾ ಒಂದಿಲ್ಲೊಂದು ವಿಚಾರವಗಿ ಸುದ್ದಿಯಲ್ಲಿರುತ್ತದೆ. ಈ ಹಿಂದೆ ವಚನಾನಂದ ಶ್ರೀಗಳ ವಿಚಾರವಾಗಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿತ್ತು. ಇದೀಗ ಮಠದ ಟ್ರಸ್ಟ್‌ನಲ್ಲಿ 10 ಕೋಟಿ ರೂ.ಗೂ ಅಧಿಕ ಸರ್ಕಾರಿ ಅನುದಾನ ದುರ್ಬಳಕೆಯಾಗಿದೆ ಎಂಬ ಗಂಭೀರ ಆರೋಪ ಭಾರಿ ಸಂಚಲನ ಮೂಡಿಸಿದೀ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜಭವನ, ಅನುದಾನ ದುರ್ವಳಕೆ ಆರೋಪದ ಬಗ್ಗೆ ತಕ್ಷಣವೇ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದೆ.
ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭಾಕರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಮಠಕ್ಕೆ ಬಿಡುಗಡೆಯಾದ ಅನುದಾನದ ದುರುಪಯೋಗ ಮತ್ತು ಕಾಮಗಾರಿಗಳ ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಮಠದ ಆಡಳಿತ ಮಂಡಳಿಯಲ್ಲಿ ಆತಂಕ ಶುರುವಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಮಠದಲ್ಲಿ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಸರ್ಕಾರವು 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಈ ಸರ್ಕಾರಿ ಹಣವನ್ನು ಮಠದ ಟ್ರಸ್ಟ್ ದುರ್ಬಳಕೆ ಮಾಡಿಕೊಂಡಿದೆ ಮತ್ತು ಕಾಮಗಾರಿಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ‘ಪಂಚಮಸಾಲಿ ಮಠದ ಲೆಕ್ಕಕೊಡಿ ಚಳುವಳಿ’ ಅಧ್ಯಕ್ಷ ಎಂ.ಜಿ. ಪರಮೇಶ್ವರ ಗೌಡ ಹಾಗೂ ಹರಿಹರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಅವರು ರಾಜ್ಯಪಾಲರಿಗೆ ಅಧಿಕೃತ ದೂರು ಸಲ್ಲಿಸಿದ್ದರು.
ಮಠಕ್ಕೆ ಬಂದ ಸರ್ಕಾರಿ ಅನುದಾನದ ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.

