ಐಪಿಎಲ್ 2023 ಕ್ಕೆ ಕ್ಷಣಗಣನೆ ಶುರುವಾಗಿದ್ದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನ ಐಪಿಎಲ್ 16ನೇ ಸೀಸನ್ ಉದ್ಘಾಟನಾ ಸಮಾರಂಭ ಸೇರಿದಂತೆ ಮೊದಲ ಪಂದ್ಯಕ್ಕೆ ಸಿದ್ಧವಾಗಿದೆ.
ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎದುರಾಗಲಿವೆ.
ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಬಿಂಬಿತವಾಗಿರುವ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ನಟಿ ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಹೆಜ್ಜೆ ಹಾಕಲಿದ್ದಾರೆ.
ಐಪಿಎಲ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ, ವೇದಿಕೆಯಲ್ಲಿ ರಶ್ಮಿಕಾ ಮತ್ತು ತಮನ್ನಾ ನೃತ್ಯದ ಅಭ್ಯಾಸದಲ್ಲಿ ತೊಡಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಕಿಂಗ್ಸ್ ನಡುವಿನ ಸ್ಪರ್ಧೆಯ ಆರಂಭಿಕ ಮುಖಾಮುಖಿಯ ಮೊದಲು ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ ಈ ಇಬ್ಬರು ನಟಿಯರು ಸ್ಟಾರ್ ಗಾಯಕ ಅರಿಜಿತ್ ಸಿಂಗ್ ಜೊತೆಗೂಡಲಿದ್ದಾರೆ.
Lights 💡
Camera 📸
Action 🔜⏳@tamannaahspeaks & @iamRashmika are geared up for an exhilarating opening ceremony of #TATAIPL 2023 at the Narendra Modi Stadium 🏟️🎇 pic.twitter.com/wAiTBUqjG0— IndianPremierLeague (@IPL) March 30, 2023