HomeKarnatakaಸೆ.9 ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್' : ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ...

ಸೆ.9 ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’ : ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ!

ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವಂತೆ ಸೆಪ್ಟೆಂಬರ್ 09ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದೆ  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳಾದ ಚಿಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ಆರ್.ಇ.ಆರ್.ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ, ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಈ ಲೋಕ ಅದಾಲತ್‌ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು.

ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅಧಾಲತ್ ಒಂದು ವಿಶೇಷ ಅವಕಾಶವಾಗಿದೆ. ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಲಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular