HomeIndiaBREAKING : ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ 'ರತನ್ ಟಾಟಾ'...

BREAKING : ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ |Ratan Tata

ಟಾಟಾ ಸನ್ಸ್ನ ಅಧ್ಯಕ್ಷ ರತನ್ ಟಾಟಾ(86) ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಟಾಟಾ ಸನ್ಸ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಬುಧವಾರ ನಿಧನರಾಗಿದ್ದಾರೆ.

ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ. ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ.

ಇಂದು ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ಬಳಿಕ ಸಂಜೆ ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular