HomeKarnatakaBREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

BREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.

ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ ಸಂಭವಿಸಿದೆ. ಜಾತ್ರೆಯಲ್ಲಿ ರಥ ಎಳೆಯುವಾಗ ನೂಕು ನುಗ್ಗಲು ಉಂಟಾಗಿದ್ದು, ರಥದ ಗಾಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂಡಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular