HomeKarnatakaಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರ ಕುಟುಂಬಗಳಿವೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 1,16,95,029 ಬಿಪಿಎಲ್ ಕಾರ್ಡ್ ದಾರರಿದ್ದಾರೆ. ಆರು ತಿಂಗಳಿನಿಂದ 3.26 ಲಕ್ಷ ಕಾರ್ಡ್ ದಾರರು ಪಡಿತರ ಪಡೆದುಕೊಂಡಿಲ್ಲ. ಇಂತಹ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಸೂಚನೆ ನೀಡಿದೆ. ಪಡಿತರ ಪಡೆಯದ ಕಾರ್ಡ್ ದಾರರಿಗೆ ಯಾವುದೇ ನೋಟಿಸ್ ನೀಡದೆ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಚಿಕಿತ್ಸೆ ಪಡೆಯಲು, ಪಿಂಚಣಿ ಸೌಲಭ್ಯ, ಆರ್‌ಟಿಇ ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಕಾರ್ಡ್ ನಿಂದ ಅನುಕೂಲವಾಗಿದೆ. ಕಾರಣಾಂತರದಿಂದ ಕೆಲವರು ಪಡಿತರ ಪಡೆದುಕೊಳ್ಳುತ್ತಿಲ್ಲ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಕೋಟಿ ರೂ. ಉಳಿತಾಯವಾಗುತ್ತದೆ. ಹೀಗಿದ್ದರೂ ಪಡಿತರ ಪಡೆಯದವರ ಕಾರ್ಡ್ ರದ್ದು ಮಾಡುವುದರಿಂದ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular